ಮಂಡ್ಯ; ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ಮಧ್ಯೆ ಕಲಹ ನಡೆದಿರುವ ಆರೋಪ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲ್ಲೂರು ಗ್ರಾಮದಲ್ಲಿ ಕೇಳಿ ಬಂದಿದೆ.
ಮಹಿಳೆಯರ ಮೇಲೆ ಯುವಕ ಮನಸೋ ಇಚ್ಛೆ ಹಲ್ಲೆ ನಡೆಸಿ, ಚಿನ್ನದ ಸರ ಕಸಿದು ದೌರ್ಜನ್ಯ ಎಸಗಿದ್ದಾನೆಂಬ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಮೂವರು ಮಹಿಳೆಯರ ಮೇಲೆ ದೊಣ್ಣೆ ಹಾಗೂ ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದೆ.
ನೆಲ್ಲೂರು ಗ್ರಾಮದ ಲಕ್ಮಮ್ಮ ಸಾಕಮ್ಮ, ರತ್ಮಮ್ಮ ಮೇಲೆ ಯುವಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಾಯಾಳುಗಳನ್ನು ಮಳವಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.