ಶಿವಮೊಗ್ಗ : ಇಲ್ಲಿನ ರಾಗಿ ಗುಡ್ಡದ ಬಳಿ ಗಣಪತಿ ವಿಗೃಹಕ್ಕೆ ಅನ್ಯಕೋಮಿನ ವ್ಯಕ್ತಿಯೊಬ್ಬ ಅಪಚಾರವೆಸಗಿರುವ ಆರೋಪ ಕೇಳಿ ಬಂದಿದೆ. ರಾಗಿ ಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿರುವ ಗಣಪತಿ ವಿಗೃಹಕ್ಕೆ ಶನಿವಾರ ಸಂಜೆ ಅಪಚಾರ ಮಾಡಿರುವುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಈಶ್ವರಪ್ಪ ಜೊತೆ ಪುತ್ರ ಕಾಂತೇಶ್ ಸೇರಿದಂತೆ ಹಲವು ನಾಯಕರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ.
ಬಡಾವಣೆಯ ಮುಖ್ಯ ರಸ್ತೆಯಲ್ಲಿ ಇತ್ತೀಚೆಗಷ್ಟೇ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿ ವಿಗೃಹ ಹಾಗೂ ನಾಗ ದೇವರ ವಿಗೃಹಕ್ಕೆ ಅನ್ಯಕೋಮಿನ ವ್ಯಕ್ತಿಯೊಬ್ಬ ಅಪಚಾರ ಮಾಡಿರುವುದು ತಿಳಿದು ಬಂದಿದೆ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸುವುದಾಗಿಯೂ ಹೇಳಿದ್ದಾರೆ