ಕೋಲಾರ: ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ.
ಶಾಸಕರ ಮುಂದೆಯೇ ಕೈ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ. ಕೆ.ಹೆಚ್. ಮುನಿಯಪ್ಪ ಹಾಗೂ ಕೆಲವು ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ದ ಕೆಲಸ ಮಾಡಿದವರನ್ನು ವೇದಿಕೆ ಮೇಲೆ ಕೂರಿಸಿದ್ದೀರಿ ಎಂದು ಗಲಾಟೆ ಮಾಡಿದ್ದಾರೆ.
ಈ ವೇಳೆ ಕೆಲ ಕಾರ್ಯಕರ್ತರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ಮೇಲೆ ಕೈ ಮಾಡಿ ಸಭೆಯಿಂದ ಹೊರ ತಳ್ಳಿದ್ದಾರೆ. ಈ ಸಭೆಯಲ್ಲಿ ಶಾಸಕರಾದ ಕೊತ್ತೂರು ಮಂಜುನಾಥ್, ನಂಜೇಗೌಡ, ಕೋಲಾರ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.