ಬೆಂಗಳೂರು : ನೀವು ಹಾವೇರಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ದೊರೆತಿದೆ. ಹಾವೇರಿ ನಗರಸಭೆಯಲ್ಲಿ ಖಾಲಿ (Haveri Municipal Council Recruitment 2026) ಇರುವ 73 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 73 ಪೌರ ಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಾವೇರಿ ನಗರಸಭೆ
ಹುದ್ದೆ ಹೆಸರು: ಪೌರ ಕಾರ್ಮಿಕರು
ಒಟ್ಟು ಹುದ್ದೆ: 73
ಉದ್ಯೋಗ ಸ್ಥಳ: ಹಾವೇರಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 30
ಹಾವೇರಿ ಹಾಗೂ ರಾಣೆಬೆನ್ನೂರಿನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ haveri.nic.in ಗೆ ಭೇಟಿ ನೀಡಬೇಕು.
ಪೌರ ಕಾರ್ಮಿಕ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ಹಾವೇರಿ ನಗರಸಭೆ ಕಚೇರಿ
ಎಂ.ಜಿ. ಸರ್ಕಲ್ ಹತ್ತಿರ, ಹಾವೇರಿ – 581110
ಇದನ್ನೂ ಓದಿ : ವಿಧಾನಸಭೆ ಸಮರ : ಅಸ್ಸಾಂ, ಕೇರಳದಲ್ಲಿ ಬಿಜೆಪಿ-ಎಡರಂಗದ ಹ್ಯಾಟ್ರಿಕ್ ಕನಸು.. ಪುದುಚೇರಿಯಲ್ಲಿ ಮತ್ತೆ ಅಧಿಕಾರಕ್ಕೆ NDA ಕಸರತ್ತು!



















