ಗದಗ : ಗಣೇಶ ವಿಸರ್ಜನೆ ಸಂದರ್ಭದಲ್ಲಿ (Ganesha Procession) ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಗದಗ (Gadag) ನಗರದ ಟಾಂಗಾಕೂಟ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಭಾನುವಾರ ಮಧ್ಯರಾತ್ರಿ ವೇಳೆ ನಡೆದಿದೆ ಎನ್ನಲಾಗಿದೆ. ಗಲಾಟೆ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ (Police Lati charge) ಮಾಡಿದ್ದಾರೆ. ಪಟಾಕಿ ಹಚ್ಚುವ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ವಾಗ್ವಾದ ನಡೆದಿದೆ. ಇದು ವಿಕೋಪಕ್ಕೆ ತೆರಳಿ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ, ತಿಳಿಗೊಳಿಸಲು ಯತ್ನಿಸಿದ್ದಾರೆ.
ಆದರೆ, ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದರು. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.