ದಿವ್ಯಾಂಗರ ಚಾಂಪಿಯನ್ಸ್ ಟ್ರೋಫಿ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಫೈನಲ್ ನಲ್ಲಿ ಭಾರತ(india) ಹಾಗೂ ಇಂಗ್ಲೆಂಡ್ ತಂಡಗಳು ಪರಸ್ಪರ ಸೆಣಸಾಟ ನಡೆಸುತ್ತಿವೆ.
ಈ ಟೂರ್ನಿಯುದ್ದಕ್ಕೂ ಭಾರತ ತಂಡ ಉತ್ತಮ ಪ್ರದರ್ಶನ ತೋರಿದೆ. ಇದಕ್ಕೂ ಮುನ್ನ ನಡೆದಿದ್ದ ಲೀಗ್ ಹಂತದ ಪಂದ್ಯದಲ್ಲಿ ಇಂಗ್ಲೆಂಡ್(England ) ವಿರುದ್ಧ ಭಾರತ ತಂಡ ಸೋತಿದ್ದರಿಂದಾಗಿ ಫೈನಲ್ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.
ದಿವ್ಯಾಂಗರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ಅಲ್ಲದೆ ಪಾಕಿಸ್ತಾನ(pakistan) ಮತ್ತು ಶ್ರೀಲಂಕಾ (srilanka) ತಂಡಗಳು ಸ್ಪರ್ಧಿಸಿದ್ದವು. ಆದರೆ ಈ ಎರಡೂ ತಂಡಗಳು ಫೈನಲ್ ತಲುಪಿವೆ. ದಿವ್ಯಾಂಗ ಚಾಂಪಿಯನ್ಸ್ ಟ್ರೋಫಿಯನ್ನು 2019 ರ ನಂತರ ಮೊದಲ ಬಾರಿಗೆ ಆಡಲಾಗುತ್ತಿದ್ದು, ಈ ಟೂರ್ನಿಯಲ್ಲಿ ಭಾರತ ತಂಡ ವಿಕ್ರಾಂತ್ ರವೀಂದ್ರ ಕೆನ್ನಿ ನಾಯಕತ್ವದಲ್ಲಿ ಕಣಕ್ಕೆ ಇಳಿದಿದೆ.
ಭಾರತ ತಂಡ ಪಾಕಿಸ್ತಾನವನ್ನು ಸೋಲಿಸುವ ಮೂಲಕ ತನ್ನ ಅಭಿಯಾನ ಆರಂಭಿಸಿತ್ತು. ಇದರ ನಂತರ, ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧವೂ ಏಕಪಕ್ಷೀಯ ಗೆಲುವು ಸಾಧಿಸಿತ್ತು. ಆ ನಂತರ ಮತ್ತೊಮ್ಮೆ ಪಾಕಿಸ್ತಾನವನ್ನು ಎದುರಿಸಿದ್ದು, ಆ ಪಂದ್ಯದಲ್ಲೂ ಭಾರತ ಗೆಲುವು ಸಾಧಿಸಿತ್ತು. ನಂತರ ನಡೆದ ಇಂಗ್ಲೆಂಡ್ ವಿರುದ್ಧದ ರೋಚಕ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿತ್ತು. ಆದರೆ, ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದ್ದು, ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ.