ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಎನ್‌ಐಎವಿಶೇಷ ನ್ಯಾಯಾಲಯ 7 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಈ ಘಟನೆ 2020ರ ಆಗಸ್ಟ್ 12ರಂದು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 187 ಆರೋಪಿಗಳನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದರು. ವಿಚಾರಣೆ ನಡೆಸಿದ ಎನ್‌ಐಎ ಕೋರ್ಟ್, ಮೂವರು ಅಪರಾಧಿಗಳು ದೋಷಿಗಳೆಂದು ತೀರ್ಪು ನೀಡಿದೆ. ಸೈದ್ ಇಕ್ರಾಮುದ್ದೀನ್, ಸೈಯದ್ ಆಸೀಫ್, ಮಹಮ್ಮದ್ ಆಸೀಫ್‌ಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ಅಪರಾಧಿಗಳು ನಿಷೇಧಿತ ಪಿಎಫ್‌ಐ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರೆಂದು ಎನ್ ಐಎ ವಾದ ಮಂಡಿಸಿತ್ತು ಎಂದು ತಿಳಿದು ಬಂದಿದೆ.
“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!