ನವದೆಹಲಿ: ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ಶ್ರೀಮಂತ ನಾಯಕ ಎಂಬುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಸರಿ. ಆದರೆ, ಈಗ ಅವರು ದೇಶದಲ್ಲಿಯೇ ಕುಬೇರ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ದೇಶದ ಎರಡನೇ ಶ್ರೀಮಂತ ಸಚಿವ (Rich Minister) ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ತಿಳಿಸಿದೆ. ಈ ವರದಿಯು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ ಸಿದ್ಧವಾಗಿರುವುದು ಎನ್ನಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಕೂಡ ನೂರು ಕೋಟಿಗಿಂತ ಹೆಚ್ಚು ಆಸ್ತಿ ಇರುವ ಎಂಟು ಸಚಿವರಿದ್ದಾರೆ. ನಂತರದ ಸ್ಥಾನದಲ್ಲಿ ಆಂಧ್ರ ಇದೆ.643 ಸಚಿವರ ಪೈಕಿ 302 ಮಂದಿ (47%) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. 174 ಸಚಿವರ ವಿರುದ್ಧ (27%) ಗಂಭೀರ ಅಪರಾಧ ಪ್ರಕರಣಗಳಿವೆ. ಕೇಂದ್ರ ಸಚಿವ ಸಂಪುಟದ 72ರಲ್ಲಿ 29 (40%) ಮಂದಿ ವಿರುದ್ಧ ಪ್ರಕರಣಗಳಿವೆ.
ಕುಬೇರ ಸಚಿವರ ಪಟ್ಟಿಯಲ್ಲಿ ಚಂದ್ರಶೇಖರ ಪೆಮ್ಮಸಾನಿ (ಕೇಂದ್ರ ಸಚಿವ) – ಟಿಡಿಪಿ – (ಗುಂಟೂರು ಸಂಸದ) – 5,705 ಕೋಟಿ ರೂ. ಆಸ್ತಿ ಹೊಂದಿ ಮೊದಲ ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಡಿ.ಕೆ. ಶಿವಕುಮಾರ್ – ಕಾಂಗ್ರೆಸ್ – ಕನಕಪುರ – 1,413 ಕೋಟಿ, ಚಂದ್ರಬಾಬು ನಾಯ್ಡು ನಾರಾ – ಟಿಡಿಪಿ – ಕುಪ್ಪಂ – 971 ಕೋಟಿ, ನಾರಾಯಣ ಪೊಂಗೂರು – ಟಿಪಿಡಿ – ನೆಲ್ಲೂರು – 824 ಕೋಟಿ ಆಸ್ತಿ ಹೊಂದಿದ್ದಾರೆ.