ಗುವಾಹಟಿ : ಅಸ್ಸಾಂನ ಗುವಾಹಟಿಯಲ್ಲಿರುವ ಇತಿಹಾಸ ಪ್ರಸಿದ್ದ ಕಾಮಾಕ್ಯ ದೇಗುಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರೊಂದಿಗಿಂದು ಅಸ್ಸಾಂನ ಗುವಾಹಟಿಯಲ್ಲಿರುವ ಪವಿತ್ರ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದೆವು. ತಾಯಿ ಕಾಮಾಕ್ಯ ಆಶೀರ್ವಾದವು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿ ನೀಡಲಿ ಎಂದು ಪಾರ್ಥಿಸಿದ್ದಾರೆ.
ಇದನ್ನೂ ಓದಿ : ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ | ಜಿಲ್ಲಾಧಿಕಾರಿ ಆದೇಶ



















