ಕೊಪ್ಪಳ: ಬೆಂಗಳೂರಿನ ಬೆನಗಾನಹಳ್ಳಿಯಲ್ಲಿ ಡಿ.ಕೆ. ಶಿವಕುಮಾರ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದಾಗ ಡಿ.ಕೆ. ಶಿವಕುಮಾರ್ ಭೂಮಿ ಕಬಳಿಸಿದ್ದಾರೆ. ಯಡಿಯೂರಪ್ಪ ಸರಕಾರವಿದ್ದಾಗ ಡಿ ನೋಟಿಫೈ ಮಾಡಲಾಗಿದೆ. ಡಿ ಕೆ ಶಿವಕುಮಾರರಂಥವರು ಸಿಎಂ ಆಗಬಾರದು ಎಂದಿದ್ದಾರೆ.
ಅಲ್ಲದೇ, ಕೇತನಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗು ಸಂಬಧಿಕರು 71 ಎಕರೆ ಭೂಮಿ ಕಬಳಿಸಿದ್ದಾರೆ. ಈ ಕುರಿತು ನ್ಯಾಯಲಯಕ್ಕೆ ಹೋಗಲಾಗಿದೆ. ಕಂದಾಯ ಸಚಿವ ಕೃಷ್ಣಾ ಭೈರೇಗೌಡ ಅವರು ಭೂಮಿ ವಾಪಸ್ಸು ಪಡೆಯಲು ಮುಂದಾಗಿಲ್ಲ. ನ್ಯಾಯಲಯದ ತೀರ್ಮಾನದಂತೆ ನಡೆದುಕೊಳ್ಳೋಣ ಎನ್ನುತ್ತಿದ್ದಾರೆ ಎಂದರು.
ಅಲ್ಲದೇ, ಸಿದ್ದರಾಮಯ್ಯ ಅವರ ಸರ್ಕಾರ ರೈತರ ಮೂರು ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.