ಬಮೂಲ್ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆಯಾಗಿದ್ದಾರೆ.
ಒಕ್ಕೂಟದ ಸದಸ್ಯರು, ಚುನಾಯಿತರಿಂದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಡಿ.ಕೆ. ಸುರೇಶ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಪಟ್ಟ ಸಿಗುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬಮುಲ್ ಕಚೇರಿ ಬಳಿ ಸಿಹಿ ಹಂಚಿ ಅಭಿಮಾನಿಗಳು ಜೈಕಾರ ಕೂಗಿ ಸಂಭ್ರಮಿಸಿದ್ದಾರೆ. ಹಾರ, ಶಾಲು ಹಾಕಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಈ ವೇಳೆ ಮಾತನಾಡಿದ ಡಿ.ಕೆ. ಸುರೇಶ್, ರೈತರು, ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಇವತ್ತು ನನ್ನನ್ನು ಎಲ್ಲರೂ ಸೇರಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ರೈತರು ನನ್ನ ಮೇಲಿಟ್ಟಿರುವ ಭರವಸೆ ಉಳಿಸಿಕೊಳ್ಳುತ್ತೇನೆ. ಅಧ್ಯಕ್ಷ ಸ್ಥಾನದಲ್ಲಿ ಕುಳಿತು ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ. ಹೈನುಗಾರಿಕೆ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಗಮನ ಕೊಡುತ್ತೇನೆ. ಸರ್ಕಾರದ ಜೊತೆ ಚರ್ಚಿಸಿ ರೈತರಿಗೆ ಅನುಕೂಲ ಆಗುವಂತೆ ಮಾಡುತ್ತೇನೆ. ನನ್ನನ್ನು ಆಯ್ಕೆ ಮಾಡಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.