ಬೆಳಗಾವಿ: ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ನಾನು ಹೇಳಲು ಬಯಸುವುದು ಏನಂದ್ರೆ, ರಾಜ್ಯದಲ್ಲಿ ಬಿಜೆಪಿಯವರಿಗೆ ಒಂದೇ ಒಂದು ಸಭೆ ಮಾಡಲು ಬಿಡುವುದಿಲ್ಲ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ. ನಿಮಗಿಂತ ಕಾರ್ಯರೂಪ ಮಾಡುವ ಶಕ್ತಿಯನ್ನು ಜನರು ನನಗೆ ನೀಡಿದ್ದಾರೆ. ನೀವು ಇದೇ ವರ್ತನೆ ಮುಂದುವರೆಸಿದರೆ ಪರಿಣಾಮ ಸರಿಯಾಗಿ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.



















