ಬೆಂಗಳೂರು: ಚಾಮರಾಜನಗರದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (DLSA Kalaburagi Recruitment 2025) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಲವು ಪ್ಯಾರಾ ಲೀಗಲ್ ವಾಲಂಟೀರ್ ಗಳ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 8
ಉದ್ಯೋಗ ಸ್ಥಳ: ಚಾಮರಾಜನಗರ
ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಗೌರವ ಧನವನ್ನು ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವವರು ಮೊದಲಿಗೆ chamarajanagara.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ, ಎಡಿಆರ್ ಕಟ್ಟಡ, ಜಿಲ್ಲಾ ನ್ಯಾಯಾಲಯ ಆವರಣ, ಚಾಮರಾಜನಗರ ವಿಳಾಸಕ್ಕೆ ಕಳುಹಿಸಬಹುದು. ಆಯಾ ತಾಲೂಕಿನಲ್ಲಿರುವವರು ಸದಸ್ಯ ಕಾರ್ಯದರ್ಶಿಗಳು, ತಾಲೂಕು ಕಾನೂನು ಸೇವಾ ಸಮಿತಿ ಕಚೇರಿಗಳಾದ ಕೊಳ್ಳೇಗಾಲ / ಗುಂಡ್ಲುಪೇಟೆ / ಯಳಂದೂರು, ಇವರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.