ಬೆಂಗಳೂರು: ಕಲಬುರಗಿಯಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (DLSA Kalaburagi Recruitment 2025) ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರು ಪ್ಯಾರಾ ಲೀಗಲ್ ವಾಲಂಟೀರ್ ಗಳ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 29 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಒಟ್ಟು ಹುದ್ದೆಗಳು: 06
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್ ಹಾಗೂ ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 29
ಉದ್ಯೋಗ ಸ್ಥಳ: ಕಲಬುರಗಿ
ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಗೌರವ ಧನವನ್ನು ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವವರು ಮೊದಲಿಗೆ kalaburagi.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ dlsakalaburagi@gmail.com ವಿಳಾಸಕ್ಕೆ ಇ-ಮೇಲ್ ಮಾಡಬಹುದು. ಇಲ್ಲವೇ, Office of District Legal Services Authority, District Court Premises, Kalaburagi ವಿಳಾಸಕ್ಕೆ ಪೋಸ್ಟ್ ಮಾಡಬಹುದಾಗಿದೆ.