ಬೆಂಗಳೂರು: ಉಡುಪಿಯಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (DLSA Udupi Recruitment 2025) ಖಾಲಿ ಇರುವ 33 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೀಡಿಯೇಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 8 ಕೊನೆಯ ದಿನವಾಗಿದೆ. ಇದರೊಂದಿಗೆ ಉಡುಪಿಯಲ್ಲಿ ವೃತ್ತಿಜೀವನ ಕೈಗೊಳ್ಳುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಒಟ್ಟು ಹುದ್ದೆಗಳು: 33
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 8
ಉದ್ಯೋಗ ಸ್ಥಳ: ಉಡುಪಿ
ಉಡುಪಿ, ಕಾರ್ಕಳ ಹಾಗೂ ಕುಂದಾಪುರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ನಂತರ ನೇಮಕಾತಿ ಆದೇಶ ಹೊರಡಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವವರು ಮೊದಲಿಗೆ udupi.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ District Mediation Center (DMC), Udupi-576101ವಿಳಾಸಕ್ಕೆ ಪೋಸ್ಟ್ ಮಾಡಬಹುದಾಗಿದೆ.
ಇದನ್ನೂ ಓದಿ: ಜಿಲ್ಲಾ ನ್ಯಾಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು : ಹೀಗೆ ಅರ್ಜಿ ಸಲ್ಲಿಸಿ



















