ಉಡುಪಿ : ಉಡುಪಿಯಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (DLSA Udupi Recruitment 2025) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿದೆ. ಇದರೊಂದಿಗೆ ಉಡುಪಿಯಲ್ಲಿ ವೃತ್ತಿಜೀವನ ಕೈಗೊಳ್ಳುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 5
ಉದ್ಯೋಗ ಸ್ಥಳ: ಉಡುಪಿ
ಪದವಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಪ್ರತಿ 6 ತಿಂಗಳಿಗೊಮ್ಮೆ ಗುತ್ತಿಗೆಯನ್ನು ನವೀಕರಿಸಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 18,935 ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಮೊದಲಿಗೆ udupi.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ Chairman, District Legal Services Authority, Udupi-576101 ವಿಳಾಸಕ್ಕೆ ಪೋಸ್ಟ್ ಮಾಡಬಹುದಾಗಿದೆ.
ಇದನ್ನೂ ಓದಿ : ಯಲಬುರ್ಗಾ | ಹಿರಿಯ ನಾಯಕ, ಮಾಜಿ ಶಾಸಕ ಶಿವಶರಣಪ್ಪಗೌಡ ವಿಧಿವಶ



















