ಭಾರತ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ಮಧ್ಯೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದು, ಈಗಾಗಲೇ ಎರಡೂ ತಂಡಗಳು ಒಂದೊಂದು ಪಂದ್ಯ ಗೆದ್ದು ಬೀಗಿವೆ. ಹೀಗಾಗಿ ಮೂರನೇ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ.
ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಟಿ20 ಸರಣಿ ಸಿಗಲಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡ ಅದ್ಭುತ ಜಯ ಸಾಧಿಸಿ 1-0 ಮುನ್ನಡೆ ಸಾಧಿಸಿತ್ತು. ನಂತರ ಎರಡನೇ ಪಂದ್ಯವನ್ನು ವೆಸ್ಟ್ ಇಂಡೀಸ್ ಗೆದ್ದು ಸರಣಿ ಸಮ ಮಾಡಿಕೊಂಡಿತು. ಹೀಗಿಗ ಸರಣಿ 1-1 ರಲ್ಲಿ ಸಮವಾಗಿದೆ. ನಾಳೆ ನಡೆಯುವ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ.
3ನೇ ಟಿ20 ಪಂದ್ಯ ಡಿ. 19ರಂದು ನಡೆಯಲಿದೆ. ಭಾರತೀಯ ಕಾಲಮಾನದಂತೆ ಸಂಜೆ 7ಕ್ಕೆ ಪಂದ್ಯ ನಡೆಯಲಿದೆ.