ನಟ ಅಲ್ಲು ಅರ್ಜುನ್ ನಟಿಸಿರುವ ಪುಷ್ಪ 2 ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಬಿಹಾರದಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ. ಚಿತ್ರ ತಂಡವು ‘ಪುಷ್ಪ 2’ ಚಿತ್ರದ ಪ್ರಚಾರವನ್ನು ಕೂಡ ತುಂಬ ಅದ್ದೂರಿಯಾಗಿ ಮಾಡುತ್ತಿದೆ. ಚಿತ್ರದ ಬಿಡುಗಡೆಯ ಸಮಯ ಹತ್ತಿರವಾಗುತ್ತಿದ್ದಂತೆ ಚಿತ್ರದ ಟ್ರೇಲರ್ ಬಿಡುಗಡೆಯಾಗುವ ಸಮಯ ಹತ್ತಿರ ಬಂದಿದೆ.
ಬಿಹಾರದ ಪಾಟ್ನಾದಲ್ಲಿ ಬೃಹತ್ ವೇದಿಕೆ ನಿರ್ಮಿಸಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನವೆಂಬರ್ 17ರಂದು ಟ್ರೇಲರ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಿದೆ. ‘ಪುಷ್ಪ 2’ ತಂಡದವರು ಟ್ರೇಲರ್ ಬಿಡುಗಡೆ ಮಾಡಲು ಬಿಹಾರವನ್ನೇ ಏಕೆ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಅಭಿಮಾನಿಗಳು ಪ್ರಶ್ನಿಸತ್ತಿದ್ದಾರೆ.
ದಕ್ಷಿಣ ಭಾರತದಲ್ಲಿ ಸಹಜವಾಗಿಯೇ ಈ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಗುವುದು ಗ್ಯಾರಂಟಿ ಎನ್ನಲಾಗಿದೆ. ಉತ್ತರ ಭಾರತದಲ್ಲಿ ಕೂಡ ಈ ಸಿನಿಮಾಗೆ ಉತ್ತಮ ಕಲೆಕ್ಷನ್ ಆಗಬೇಕು ಎಂದರೆ ಅಲ್ಲಿ ಪ್ರಚಾರ ಚೆನ್ನಾಗಿ ಆಗಬೇಕು. ಹೀಗಾಗಿ ಚಿತ್ರ ತಂಡ ಈ ನಿರ್ಧಾರ ಮಾಡಿದೆ ಎನ್ನಲಾಗುತ್ತಿದೆ.