ರಾಯಚೂರು: ಬಾಣಂತಿಯರ ಸರಣಿ ಸಾವಿನ ಪ್ರಕರಣದಲ್ಲಿ ವೈದ್ಯರ (doctors)ನಿರ್ಲಕ್ಷ್ಯವೇ ಎದ್ದು ಕಾಣುತ್ತಿದೆ ಎಂದು ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಆರೋಪಿಸಿದ್ದಾರೆ.
ಬಾಣಂತಿಯರ ಸಾವಿನ ಸರಣಿ ಮುಂದುವರೆದ ಹಿನ್ನೆಲೆಯಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ್(Karemma G. Nayak) ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಬಾಣಂತಿಯರ ಸಾವಿನಲ್ಲಿ ಆಸ್ಪತ್ರೆ ವೈದ್ಯರ ನಿರ್ಲಕ್ಷವೇ ಎದ್ದು ಕಾಣುತ್ತಿದೆ. ಕೇವಲ ರಿಮ್ಸ್ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಬಾಣಂತಿಯರ ಸಾವಿನ ಪ್ರಕರಣಗಳು ನಡೆಯುತ್ತಿವೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ(Hospital) ಬಾಣಂತಿಯರು ಯಾಕೆ ಸಾಯುತ್ತಿಲ್ಲ? ಎಂದು ಪ್ರಸ್ನಿಸಿದ್ದಾರೆ.
ಬದುಕಿ ಬಾಳಬೇಕಾದ ಜೀವಗಳು ಸಾಯುತ್ತಿವೆ. ಬಾಣಂತಿಯರ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕು. ಮೃತರ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು. ಬಾಣಂತಿಯರ ಸಾವಿನಿಂದಾಗಿ ಅನಾಥವಾಗಿರುವ ಮಕ್ಕಳನ್ನು ಸರ್ಕಾರ(government) ದತ್ತು ಪಡೆಯಬೇಕು. ಸರ್ಕಾರ ಮಹಿಳೆಯರಿಗಾಗಿ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದೇವೆ ಎಂದು ಹೇಳುತ್ತಿದೆ. ಆದರೆ, ಈ ಸಾವಿನ ಕುರಿತು ಮಾತ್ರ ಮೌನ ವಹಿಸಿದೆ ಎಂದು ಕಿಡಿಕಾರಿದ್ದಾರೆ.