ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ಪುತ್ತೂರಿನಲ್ಲಿ ನಿನ್ನೆಯಿಂದ ವೈದ್ಯರು ಹಾಗೂ ಹಿಂದೂ ಸಂಘಟನೆಗಳಿಂದ ಪೊಲೀಸ್ ಠಾಣೆ ಮುಂಭಾಗ ಹಾಗೂ ಮುಖ್ಯ ರಸ್ತೆ ತಡೆದು ಪ್ರತಿಭಟಿನೆ ನಡೆಸಲಾಗುತ್ತಿದೆ. ಅದು ರಾತ್ರಿ ಕೂಡ ಮುಂದುವರೆದಿದೆ. ಪೊಲೀಸ್ ಠಾಣೆ ಮುಂದೆ ವೈದ್ಯರು ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಸ್ಥಳಕ್ಕೆ ಎಸ್ಪಿ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಈ ವೇಳೆ ಎಸ್ಪಿ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಇವತ್ತು ಕೂಡ ಪುತ್ತೂರು ತಾಲೂಕಿನ ವೈದ್ಯರ ಮುಷ್ಕರ ಮುಂದುವರೆದಿದ್ದು, ಹಲವು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ ಮುಸ್ಲಿಂ ಒಕ್ಕೂಟದ ಪತ್ರಿಕಾಗೋಷ್ಠಿಗೆ ವೈದ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.



















