ಹಾವೇರಿ: ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಕೊಟ್ಟ ಮಾತು ತಪ್ಪುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಶಿಗ್ಗಾಂವ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ, ಸೂರ್ಯ -ಚಂದ್ರರಿರುವವರೆಗೂ ನಾವು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಇಂದಿರಾ ಗಾಂಧಿ ಘೋಷಿಸಿದ ಯೋಜನೆ ಸೇರಿ ಹಲವಾರು ಯೋಜನೆಗಳು ಚಾಲ್ತಿಯಲ್ಲಿವೆ. ಉದ್ಯೋಗ ಖಾತ್ರಿ ಮುಂದುವರಿದಿಲ್ಲವೇ? ಹಾಗೆ ನಮ್ಮ ಗ್ಯಾರಂಟಿಗಳು ಮುಂದುವರಿಯುತ್ತೆ. ನಾವು ಯಾರನ್ನು ಟಿಕೀಸಲು ಬಂದಿಲ್ಲ.
ಕೊಟ್ಟ ಮಾತು ಉಳಿಸಿಕೊಂಡು ಹೋಗುತ್ತೇವೆ. ವಿರೋಧಿಗಳು ಸುಖಾ ಸುಮ್ಮನೆ ನಮ್ಮ ಗ್ಯಾರಂಟಿಗಳ ವಿರುದ್ಧ ಆರೋಪ ಮಾಡುತ್ತಿವೆ. ಆದರೆ, ನಾವು ಮಾತ್ರ ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದಿದ್ದಾರೆ.