ಬೆಂಗಳೂರು : ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಹುಟ್ಟಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್ ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.
ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಹಂಚಿಕೊಂಡಿರುವ ಧನಂಜಯ್, ತಾವು ತಂದೆಯಾದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಮಗುವಿನ ಮುದ್ದಾದ ಮುಖ ನೋಡಲು ಫ್ಯಾನ್ಸ್ ಕಾದಿದ್ದಾರೆ.
ಕೆಲ ದಿನಗಳ ಹಿಂದೆ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕೃತಿ ಮಡಿಲಲ್ಲಿ ಮಾಡಿಕೊಂಡಿದ್ದ ಬೇಬಿಬಂಪ್ ಫೋಟೋಶೂಟ್ ನ್ನು ಹಂಚಿಕೊಂಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಮಗು ಜನನವಾಗಿದೆ.
ಕೆಲ ತಿಂಗಳ ಹಿಂದೆ ಸಂದರ್ಶನದಲ್ಲಿ ಮಾತನಾಡಿದ್ದ ಡಾಲಿ ಧನಂಜಯ್ ತಂದೆಯಾಗುತ್ತಿರುವ ಖುಷಿಯ ಬಗ್ಗೆ ಮಾತನಾಡಿದ್ದರು. ಇದೊಂದು ಹೊಸ ಅನುಭವ ಎಂದು ಹೇಳಿಕೊಂಡಿದ್ದರು.
ಕಳೆದ ವರ್ಷ ಫೆ.16ರಂದು ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಅವರು ಮೈಸೂರಿನಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದರು. ಇದೀಗ ಮೊದಲ ಮಗುವಿನ ಪೋಷಕರಾಗಿದ್ದಾರೆ. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.
ಇದನ್ನೂ ಓದಿ : ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!



















