ಬೆಂಗಳೂರು: ಮದುವೆ ಆಗುವ ಉತ್ಸಾಹದಲ್ಲಿರುವ ನಟ ರಾಕ್ಷಸ ಡಾಲಿ ಧನಂಜಯ್ ಗಣ್ಯರಿಗೆ ಮದುವೆ ಆಮಂತ್ರಣ ನೀಡುತ್ತಿದ್ದಾರೆ. ಈಗ ಯಶ್ ಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ‘ಟಾಕ್ಸಿಕ್’ (Toxic) ಸೆಟ್‌ಗೆ ತೆರಳಿ ಯಶ್‌ಗೆ (Yash) ಡಾಲಿ ಮದುವೆ ಆಹ್ವಾನ ಪತ್ರಿಕೆ ನೀಡಿದ್ದಾರೆ.
ನ್ಯಾಷನಲ್ ಸ್ಟಾರ್ ಯಶ್ ಈಗ ‘ಟಾಕ್ಸಿಕ್’ ಚಿತ್ರದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ ವಿವಾಹದ ಆಹ್ವಾನ ಪತ್ರಿಕೆ ನೀಡಿ, ಆಹ್ವಾನಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಮದುವೆಯ ಸಡಗರದಲ್ಲಿರುವ ನಟ ಧನಂಜಯ್ (Daali Dhananjay) ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು, ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಮೈಸೂರಿನಲ್ಲಿ ಫೆಬ್ರವರಿ 15 ಮತ್ತು 16ರಂದು ಡಾಲಿ ಮದುವೆ ಸಮಾರಂಭ ನಡೆಯಲಿದೆ. ಡಾಲಿ ಮದುವೆ ಸಂಭ್ರಮದಲ್ಲಿ ರಾಜಕೀಯ ಗಣ್ಯರು ಸಿನಿಮಾ ಸ್ಟಾರ್ಸ್ ಭಾಗಿಯಾಗಿಲಿದ್ದಾರೆ. ಡಾ. ಧನ್ಯತಾ ಅವರನ್ನು ಡಾಲಿ ಕೈ ಹಿಡಿಯುತ್ತಿದ್ದಾರೆ.