ನಟ, ನಿರ್ಮಾಪಕ ಡಾಲಿ ಧನಂಜಯ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಈ ಮಧ್ಯೆ ಗಣ್ಯ ವ್ಯಕ್ತಿಗಳಿಗೆ ಆಮಂತ್ರಣ ಪತ್ರಿಕೆ ನೀಡುತ್ತಿದ್ದಾರೆ. ಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀಗಳ ಆಶೀರ್ವಾದ ಪಡೆದು ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
ಈಗಾಗಲೇ ಡಾಲಿ ಧನಂಜಯ ಅವರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳಿಗೆ ಆಮಂತ್ರಣ ಪತ್ರಿಕೆ ನೀಡುವಲ್ಲಿ ಬ್ಯೂಸಿಯಾಗಿದ್ದಾರೆ.