ಬೆಂಗಳೂರು : ಅಸಹಾಯಕ ಮಹಿಳೆಯರ ನೆರವಿಗಾಗಿ ಸ್ಥಾಪಿಸಲಾದ ಸಖಿ ಹಾಗೂ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸದೇ ಮಹಿಳೆಯರಿಗೆ ಅನುಕೂಲವಾಗುವಂತೆ ಮಾಡಿ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ.

ಸರ್ಕಾರವು ಅಸಾಹಯಕ ಮಹಿಳೆಯರಿಗಾಗಿ ತೆರೆದಿರುವ ಸಾಂತ್ವನ ಕೇಂದ್ರಗಳನ್ನು, ಇಲಾಖೆಯು ಮುಂದಿನ ಮಾರ್ಚ್ ವೇಳೆಗೆ ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಇದರಿಂದ ಅಶಕ್ತ ಮಹಿಳೆಯರಿಗೆ ತುಂಬಾ ತೊಂದರೆ ಉಂಟಾಗುತ್ತದೆ. ಕಾರಣ ಎಲ್ಲಾ ಮಹಿಳೆಯರಿಗೆ ನ್ಯಾಯಾಲಯ ಅಥವಾ ಪೊಲೀಸ್ ಠಾಣೆಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ, ಆದ್ದರಿಂದ ಜೀವನದಲ್ಲಿ ನೊಂದ ಮಹಿಳೆಯರು ಸಾಂತ್ವನ ಕೇಂದ್ರಗಳಲ್ಲಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಹೀಗಾಗಿ, ಸಖಿ ಹಾಗೂ ಸಾಂತ್ವನ ಕೇಂದ್ರಗಳನ್ನು ಮುಚ್ಚದಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿ, ಅಸಹಾಯಕ ಮಹಿಳೆಯರ ನೆಮ್ಮದಿಯುತ ಜೀವನಕ್ಕೆ ಅನುಕೂಲವಾಗುವಂತೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಿ ಎಂದು ಪತ್ರದ ಮೂಲಕ ಡಾ. ನಾಗಲಕ್ಷ್ಮೀ ಚೌಧರಿ ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ ; ಗ್ಯಾಸ್ ಸಿಲಿಂಡರ್ ಅಭಾವದಿಂದ ಒಕ್ಕಲಿಗರ ಸಂಘದ ಸಭೆ ರದ್ದು


















