ರಾಯಚೂರು : ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ ಅಂತ ನಾನು, ಸಿದ್ದರಾಮಯ್ಯ ಹೇಳಿದ್ದೇವೆ. ಅದಕ್ಕೆ ನಾನು ಬದ್ದನಾಗಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಕುರಿತು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ಅದರ ಬಗ್ಗೆ ಅವರು ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಿ. ಅದನ್ನ ನನ್ನ ಕೇಳಿದ್ರೆ ನಾನು ಏನು ಹೇಳಲಿ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ನನಗೆ ಪಕ್ಷ ಎಲ್ಲಾ ಕೊಟ್ಟಿದೆ. ಪಕ್ಷದ ಅಧ್ಯಕ್ಷನಾಗಿದ್ದೇನೆ. ಡಿಸಿಎಂ ಆಗಿ ರಾಜ್ಯದಲ್ಲಿ ಇತಿಹಾಸ ಬರೆಯುತ್ತಿದ್ದೇನೆ. ದೊಡ್ಡ ದೊಡ್ಡ ಕೆಲಸ ನಿಭಾಯಿಸಿದ್ದೇನೆ. ನೀರಾವರಿ ಕ್ಷೇತ್ರದಲ್ಲಿ ಇತಿಹಾಸ ಬರೆಯುತ್ತಿದ್ದೇನೆ. ಮಹಾದಾಯಿ, ಮೇಕೆದಾಟು ಹೋರಾಟ ಮಾಡಿದಿನಿ. ಪಕ್ಷ ನನಗೆ ಏನೇನು ಕೊಡಬೇಕು ಎಲ್ಲಾ ಕೊಟ್ಟಿದೆ ಎಂದು ಡಿಸಿಎಂ ಹೇಳಿದ್ದಾರೆ.