ಬೀದರ್: ಬಿಜೆಪಿ ಶಾಸಕನ ವಿರುದ್ದ ನಾಲಿಗೆ ಹರಿ ಬಿಟ್ಟವರನ್ನು ರಸ್ತೆ ಮೇಲೆ ಓಡಾಡೋಕೆ ಬಿಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಲಿಗೆ ಹರಿ ಬಿಟ್ಟಿದ್ದಾರೆ.
ಬೀದರ್ ನ ಹುಮ್ನಾಬಾದ್ ತಾಲೂಕಿನ ಹುಡಗಿ ಗ್ರಾಮದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ‘ ಹೆಸರು ಪ್ರಸ್ತಾಪಿಸದೆ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಸಹೋದರ ಹಾಗೂ ಕಾಂಗ್ರೆಸ್ ಎಂಎಲ್ ಸಿ ಚಂದ್ರಶೇಖರ್ ಪಾಟೀಲ್ ವಿರುದ್ದ ಏಕವಚನದಲ್ಲೇ ನಾಲಿಗೆ ಹರಿ ಬಿಟ್ಟಿದ್ದಾರೆ.
ಆತ ಅಧಿಕಾರ ಶಾಶ್ವತ ಎನ್ನುವ ದುರಹಂಕಾರದಲ್ಲಿ ಮಾತನಾಡಿದ್ದಾನೆ. ಈ ಕುರಿತು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸುತ್ತೇನೆ. ನಮ್ಮ ಕಾರ್ಯಕರ್ತರೇನು ಬಳೆ ತೊಟ್ಟುಕೊಂಡು ನಿಂತಿಲ್ಲ. ಅಧಿಕಾರ ಶಾಶ್ವತ ಅಲ್ಲ ಎನ್ನುವುದನ್ನು ನೆನಪು ಮಾಡಿಕೊಡಬೇಕು. ದುರಹಂಕಾರದಲ್ಲಿ ಮಾತನಾಡಿದವನಿಗೆ ಉತ್ತರಿಸಬೇಕು ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರು ಅಧಿಕಾರ ಇಲ್ಲದೇ ಇರುವಾಗಲೇ ಹೆದರಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಇಂತಹ ಪುಡಾರಿಗಳಿಗೆಲ್ಲ ನಾವು ಹೆದರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.