ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

‘ನೀನ್ ತಲೆ ಓಡಿಸ್ಬೇಡ, ಹೇಳಿದ್ ಹಾಕು’ : ಮೈದಾನದಲ್ಲಿ ಮೊಳಗಿದ ಕನ್ನಡ ಡಿಂಡಿಮ

December 5, 2025
Share on WhatsappShare on FacebookShare on Twitter

ರಾಯ್ಪುರ: ಕ್ರಿಕೆಟ್ ಮೈದಾನದಲ್ಲಿ ಆಟದ ರೋಚಕತೆಯಷ್ಟೇ ಅಲ್ಲಿ ನಡೆಯುವ ಸ್ವಾರಸ್ಯಕರ ಮಾತುಕತೆಗಳೂ ಆಗಾಗ ಅಭಿಮಾನಿಗಳ ಗಮನ ಸೆಳೆಯುತ್ತವೆ. ಬುಧವಾರ ರಾಯ್ಪುರದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಅಂತಹದ್ದೇ ಒಂದು ಅಪರೂಪದ ಹಾಗೂ ಕನ್ನಡಿಗರಿಗೆ ಹೆಮ್ಮೆ ತರುವ ಘಟನೆ ನಡೆದಿದೆ. ಟೀಂ ಇಂಡಿಯಾದ ಹಂಗಾಮಿ ನಾಯಕ ಹಾಗೂ ವಿಕೆಟ್ ಕೀಪರ್ ಕೆ.ಎಲ್. ರಾಹುಲ್ ಅವರು, ಪಂದ್ಯದ ಒತ್ತಡದ ನಡುವೆಯೂ ತಮ್ಮದೇ ರಾಜ್ಯದ ಯುವ ವೇಗಿ ಪ್ರಸಿಧ್ ಕೃಷ್ಣ ಅವರಿಗೆ ಅಪ್ಪಟ ಕನ್ನಡದಲ್ಲೇ ತರಾಟೆಗೆ ತೆಗೆದುಕೊಂಡು, ಬೌಲಿಂಗ್ ಸಲಹೆ ನೀಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ದಕ್ಷಿಣ ಆಫ್ರಿಕಾ ತಂಡವು ಭಾರತ ನೀಡಿದ್ದ ಬೃಹತ್ ಮೊತ್ತವನ್ನು ಬೆನ್ನಟ್ಟುವ ಭರಾಟೆಯಲ್ಲಿತ್ತು. ಹರಿಣ ಪಡೆಯ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳ ಮೇಲೆ ಸವಾರಿ ಮಾಡುತ್ತಿದ್ದರು. ಈ ವೇಳೆ ಬೌಲಿಂಗ್‌ಗೆ ಇಳಿದಿದ್ದ ಕನ್ನಡಿಗ ಪ್ರಸಿಧ್ ಕೃಷ್ಣ ತುಸು ಲಯ ಕಳೆದುಕೊಂಡಂತೆ ಕಂಡುಬಂದರು. ಎದುರಾಳಿ ಬ್ಯಾಟರ್‌ಗಳು ಪ್ರಸಿಧ್ ಎಸೆತಗಳಲ್ಲಿ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೈಯುತ್ತಿದ್ದರು. ಬೌಲರ್ ಒತ್ತಡಕ್ಕೆ ಒಳಗಾಗುವುದನ್ನು ಗಮನಿಸಿದ ನಾಯಕ ಕೆ.ಎಲ್. ರಾಹುಲ್, ವಿಕೆಟ್ ಕೀಪಿಂಗ್ ಮಾಡುತ್ತಿದ್ದ ಜಾಗದಿಂದಲೇ ಪ್ರಸಿಧ್ ಕೃಷ್ಣ ಅವರ ನೆರವಿಗೆ ಧಾವಿಸಿದರು. ಎದುರಾಳಿ ಬ್ಯಾಟರ್‌ಗಳಿಗೆ ತಂತ್ರ ಅರ್ಥವಾಗಬಾರದು ಎಂಬ ಕಾರಣಕ್ಕೋ ಅಥವಾ ತವರಿನ ಭಾಷೆಯ ಆಪ್ತತೆಗಾಗಿಯೋ ರಾಹುಲ್ ಕನ್ನಡದಲ್ಲೇ ಮಾತನಾಡಲು ಆರಂಭಿಸಿದರು.

ಸ್ಟಂಪ್ ಮೈಕ್‌ನಲ್ಲಿ ಸೆರೆಯಾದ ಆ ಮಾತುಗಳು

ಮೊದಲು ಫೀಲ್ಡಿಂಗ್ ಹೊಂದಾಣಿಕೆ ಮಾಡುವಾಗ “ಬಾ.. ಬಾ.. ಬೇಗ ಬಾ..” ಎಂದು ಕರೆದ ರಾಹುಲ್, ನಂತರ ಪ್ರಸಿಧ್ ಕೃಷ್ಣ ಅವರಿಗೆ ಖಡಕ್ ಎಚ್ಚರಿಕೆ ಮತ್ತು ಸಲಹೆಯನ್ನು ನೀಡಿದರು. “ಪ್ರಸಿಧ್, ನೀನು ತಲೆ ಓಡಿಸಬೇಡ, ನಾನ್ ಹೇಳಿದ್ ಹಾಕು. ಹೇಳಿದೀನಿ ಏನ್ ಹಾಕಬೇಕು ಅಂತ; ಅದನ್ನೇ ಹಾಕು,” ಎಂದು ರಾಹುಲ್ ತಾಕೀತು ಮಾಡಿದರು. ನಾಯಕನ ಮಾತಿಗೆ ಪ್ರತಿಕ್ರಿಯಿಸಿದ ಪ್ರಸಿಧ್, “ತಲೆಗೆ ಹಾಕ್ಲಾ?” (ಬೌನ್ಸರ್ ಎಸೆಯಲೇ?) ಎಂದು ಮರುಪ್ರಶ್ನೆ ಹಾಕಿದರು. ಆಗ ತಕ್ಷಣವೇ ಎಚ್ಚರಿಸಿದ ರಾಹುಲ್, “ತಲೆಗೆ ಎಲ್ಲಾ ಬೇಡ ಈಗ. ಹೇಳಿ ಬಂದಿದ್ದೀನಿ ತಲೆಗೆ ಹಾಕಬೇಡ ಅಂತ ಮಗಾ,” ಎಂದು ಕಿವಿಮಾತು ಹೇಳಿದರು. ಮೈದಾನದ ಗದ್ದಲದ ನಡುವೆಯೂ ಈ ಸ್ಪಷ್ಟ ಕನ್ನಡದ ಸಂಭಾಷಣೆ ಸ್ಟಂಪ್ ಮೈಕ್‌ನಲ್ಲಿ ರೆಕಾರ್ಡ್ ಆಗಿದ್ದು, ಕನ್ನಡಿಗ ಕ್ರಿಕೆಟ್ ಪ್ರೇಮಿಗಳಿಗೆ ಸಂತಸ ತಂದಿದೆ. ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಯಲ್ಲಿ ಕಾಮೆಂಟರಿ ಮಾಡುತ್ತಿದ್ದ ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೂಡ ಈ ಬಗ್ಗೆ ಪ್ರಸ್ತಾಪಿಸಿ, ರಾಹುಲ್ ತಮ್ಮ ಬೌಲರ್‌ಗೆ ಸ್ಪಷ್ಟ ಸಂದೇಶ ನೀಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು.

ಮರುಕಳಿಸಿದ ಹಳೆಯ ನೆನಪುಗಳು

ಭಾರತ ತಂಡದಲ್ಲಿ ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಕನ್ನಡಿಗರು ಆಡುವಾಗ ಮೈದಾನದಲ್ಲಿ ಕನ್ನಡದ ಕಂಪು ಪಸರಿಸುವುದು ಇದೇ ಮೊದಲೇನಲ್ಲ. ಹಿಂದೆ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ರಾಹುಲ್ ದ್ರಾವಿಡ್, ರಾಬಿನ್ ಉತ್ತಪ್ಪ ಮತ್ತು ಮನೀಷ್ ಪಾಂಡೆ ಅವರಂತಹ ದಿಗ್ಗಜರು ಒಟ್ಟಿಗೆ ಆಡುವಾಗಲೂ ಮೈದಾನದಲ್ಲಿ ರಣತಂತ್ರ ರೂಪಿಸಲು ಕನ್ನಡವನ್ನೇ ಬಳಸುತ್ತಿದ್ದರು. ಈಗ ರಾಹುಲ್ ಮತ್ತು ಪ್ರಸಿಧ್ ಕೃಷ್ಣ ಆ ಪರಂಪರೆಯನ್ನು ಮುಂದುವರಿಸಿದ್ದಾರೆ.

ಬ್ಯಾಟಿಂಗ್‌ನಲ್ಲಿ ಮಿಂಚಿದ ರಾಹುಲ್, ಬೌಲಿಂಗ್‌ನಲ್ಲಿ ಎಡವಿದ ಪ್ರಸಿಧ್

ಪಂದ್ಯದಲ್ಲಿ ನಾಯಕ ರಾಹುಲ್ ಬ್ಯಾಟಿಂಗ್‌ನಲ್ಲೂ ಜವಾಬ್ದಾರಿಯುತ ಆಟ ಪ್ರದರ್ಶಿಸಿದರು. ವಿರಾಟ್ ಕೊಹ್ಲಿ ಮತ್ತು ಋತುರಾಜ್ ಗಾಯಕ್ವಾಡ್ ಅವರ ಅಮೋಘ ಶತಕಗಳ ನಂತರ ಕಣಕ್ಕಿಳಿದ ರಾಹುಲ್, ಕೇವಲ 43 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ ಆರು ಬೌಂಡರಿಗಳ ಸಹಿತ ಅಜೇಯ 66 ರನ್ ಸಿಡಿಸಿದರು. ಇವರ ಅಬ್ಬರದಿಂದ ಭಾರತ 50 ಓವರ್‌ಗಳಲ್ಲಿ 358 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಆದರೆ, ಬೌಲಿಂಗ್‌ನಲ್ಲಿ ಪ್ರಸಿಧ್ ಕೃಷ್ಣ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡಲು ವಿಫಲರಾದರು. ಅವರು ಎಸೆದ 8.2 ಓವರ್‌ಗಳಲ್ಲಿ ಬರೋಬ್ಬರಿ 85 ರನ್ ಬಿಟ್ಟುಕೊಟ್ಟರು. ಅಂತಿಮವಾಗಿ ಏಡನ್ ಮಾರ್ಕ್ರಮ್ ಅವರ ಶತಕದ ಬಲದಿಂದ ದಕ್ಷಿಣ ಆಫ್ರಿಕಾ ರೋಚಕ ಜಯ ಸಾಧಿಸಿ, ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿಕೊಂಡಿತು.

ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ : ವಾಸೀಂ ಅಕ್ರಂ ದಾಖಲೆ ಪುಡಿಗಟ್ಟಿದ ಮಿಚೆಲ್ ಸ್ಟಾರ್ಕ್

Tags: CricketDon’t run awayKannada chantsKarnataka News beatring out in the field
SendShareTweet
Previous Post

ಪುಟಿನ್ ಸ್ವಾಗತಿಸಿದ ಮೋದಿ ; ಗಮನ ಸೆಳೆದ ಬಿಳಿ ಬಣ್ಣದ ‘ಫಾರ್ಚುನರ್’

Next Post

ದೇಶದಲ್ಲಿ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ | 550ಕ್ಕೂ ಹೆಚ್ಚು ಫ್ಲೈಟ್ ಕ್ಯಾನ್ಸಲ್‌ ; ಪ್ರಯಾಣಿಕರ ಆಕ್ರೋಶ

Related Posts

CSK ತಂಡದ ಹೊಸ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಚೆನ್ನೈಗೆ ಆಗಮನ.. ಅದ್ಧೂರಿ ಸ್ವಾಗತ!
ಕ್ರೀಡೆ

CSK ತಂಡದ ಹೊಸ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಚೆನ್ನೈಗೆ ಆಗಮನ.. ಅದ್ಧೂರಿ ಸ್ವಾಗತ!

ಚಿನ್ನಸ್ವಾಮಿಯಲ್ಲಿ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಪ್ರಾಕ್ಟೀಸ್.. ಸ್ಪಿನ್ನರ್‌ಗಳ ಬೆವರಿಳಿಸಿದ ‘ಕಿಂಗ್’
ಕ್ರೀಡೆ

ಚಿನ್ನಸ್ವಾಮಿಯಲ್ಲಿ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಪ್ರಾಕ್ಟೀಸ್.. ಸ್ಪಿನ್ನರ್‌ಗಳ ಬೆವರಿಳಿಸಿದ ‘ಕಿಂಗ್’

ಕೆಕೆಆರ್ ಪಾಳಯಕ್ಕೆ ಮರಳಿದ 2012ರ ‘ಐಪಿಎಲ್ ಹೀರೋ’ ಮನ್ವಿಂದರ್ ಬಿಸ್ಲಾ!
ಕ್ರೀಡೆ

ಕೆಕೆಆರ್ ಪಾಳಯಕ್ಕೆ ಮರಳಿದ 2012ರ ‘ಐಪಿಎಲ್ ಹೀರೋ’ ಮನ್ವಿಂದರ್ ಬಿಸ್ಲಾ!

ಜಸ್‌ಪ್ರೀತ್ ಬುಮ್ರಾಗೆ ಬಿಸಿಸಿಐ ಗುತ್ತಿಗೆಯಲ್ಲಿ 2 ಕೋಟಿ ರೂ. ಕಡಿತದ ಭೀತಿ!
ಕ್ರೀಡೆ

ಜಸ್‌ಪ್ರೀತ್ ಬುಮ್ರಾಗೆ ಬಿಸಿಸಿಐ ಗುತ್ತಿಗೆಯಲ್ಲಿ 2 ಕೋಟಿ ರೂ. ಕಡಿತದ ಭೀತಿ!

ಗೇರುಸೊಪ್ಪ ಆಂಜನೇಯ ಸ್ವಾಮಿ ಆಶೀರ್ವಾದ ಪಡೆದ ಟೀಂ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್
ಉತ್ತರ ಕನ್ನಡ

ಗೇರುಸೊಪ್ಪ ಆಂಜನೇಯ ಸ್ವಾಮಿ ಆಶೀರ್ವಾದ ಪಡೆದ ಟೀಂ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!
ಕ್ರೀಡೆ

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

Next Post
ದೇಶದಲ್ಲಿ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ | 550ಕ್ಕೂ ಹೆಚ್ಚು ಫ್ಲೈಟ್ ಕ್ಯಾನ್ಸಲ್‌ ; ಪ್ರಯಾಣಿಕರ ಆಕ್ರೋಶ

ದೇಶದಲ್ಲಿ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ | 550ಕ್ಕೂ ಹೆಚ್ಚು ಫ್ಲೈಟ್ ಕ್ಯಾನ್ಸಲ್‌ ; ಪ್ರಯಾಣಿಕರ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ..  ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ.. ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!

ದಾವಣಗೆರೆ ‘ಬೈ ಎಲೆಕ್ಷನ್’ ಟಿಕೆಟ್ ಘೋಷಣೆಯಾದ್ರೂ ಬಿಜೆಪಿಯಲ್ಲಿ ನಿಲ್ಲದ ಅಸಮಾಧಾನ!?

ದಾವಣಗೆರೆ ‘ಬೈ ಎಲೆಕ್ಷನ್’ ಟಿಕೆಟ್ ಘೋಷಣೆಯಾದ್ರೂ ಬಿಜೆಪಿಯಲ್ಲಿ ನಿಲ್ಲದ ಅಸಮಾಧಾನ!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat