ಬೆಂಗಳೂರು : ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾದ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ (Doordarshan Kendra Bengaluru Recruitment 2026) ಖಾಲಿ ಇರುವ 4 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬ್ರಾಡ್ ಕಾಸ್ಟ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳೂಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಫ್ರೀಲಾನ್ಸರ್ ಆಗಿ ಕೆಲಸ ಮಾಡಲು ಇಚ್ಛಿಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ದೂರದರ್ಶನ ಕೇಂದ್ರ
ಹುದ್ದೆ ಹೆಸರು: ಬ್ರಾಡ್ ಕಾಸ್ಟ್ ಅಸಿಸ್ಟಂಟ್ ಇತ್ಯಾದಿ
ಒಟ್ಟು ಹುದ್ದೆ: 4
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 10
ಒಂದು ವೆಬ್ ಸೈಟ್ ಅಸಿಸ್ಟಂಟ್, 1 ಬ್ರಾಡ್ ಕಾಸ್ಟ್ ಅಸಿಸ್ಟಂಟ್, 1 ಸಿಜಿ ಆಪರೇಟರ್ ಹಾಗೂ 1 ಆ್ಯಂಕರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಫ್ರೀಲಾನ್ಸರ್ ಗಳಿಗೆ ಇದು ಒಳ್ಳೆಯ ಅವಕಾಶವಾಗಿದೆ. 8ಒಂದು ತಿಂಗಳಲ್ಲಿ ಗರಿಷ್ಠ 7 ದಿನ ಕೆಲಸ ಮಾಡಲು ಅವಕಾಶ ಇರುತ್ತದೆ. ನೇಮಕಾತಿ ಹೊಂದಿದವರಿಗೆ ಒಂದು ದಿನಕ್ಕೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 1,125 ರೂಪಾಯಿಯಿಂದ 3 ಸಾವಿರ ರೂಪಾಯಿವರೆಗೆ ಸಂಭಾವನೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ prasarbharati.gov.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
RNU Head, Doordarshan Kendra, Bengaluru, Karnataka-560006. ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು chandananewsvacancy@gmail.com ಗೆ ಮೇಲ್ ಕೂಡ ಮಾಡಬಹುದು.
ಇದನ್ನೂ ಓದಿ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅರಣ್ಯ ಇಲಾಖೆ ನೇಮಕಾತಿ ಅರ್ಜಿ ದಿನಾಂಕ ವಿಸ್ತರಣೆ



















