ರಾಯಚೂರು : ರಾಯಚೂರು ಜಿಲ್ಲೆಯ ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಯಾದಗಿರಿಯ ಬಂಡೊಳ್ಳಿ ವಾಲ್ಮೀಕಿ ಪೀಠ ಹಾಗೂ ರಾಯಚೂರಿನ ತಿಂಥಣಿ ಕನಕಗುರು ಪೀಠಕ್ಕೆ ಭೇಟಿ ನೀಡಿದ್ದರು. ನಂತರ ಲಿಂಗಸುಗೂರಿನ ಹಟ್ಟಿಯಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಅವರ ಎದೆಯಲ್ಲಿ ನೋವು ಕಾಣಿಸಿಕೊಂಡು ಲಘು ಹೃದಯಾಘಾತ ಸಂಭವಿಸಿದೆ. ಬೆಳಗ್ಗೆ ಆರೋಗ್ಯದಿಂದಲೇ ಇದ್ದ ಸ್ವಾಮೀಜಿಗೆ ರಾತ್ರಿ ವೇಳೆ ಎದೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ.
ಸಚಿವ ಎನ್.ಎಸ್.ಬೋಸರಾಜು, ಶಾಸಕ ಬಸನಗೌಡ ದದ್ದಲ, ಶಿವರಾಜ್ ಪಾಟೀಲ್, ಮಾಜಿ ಸಂಸದ ಬಿವಿ ನಾಯಕ್ ರಾಯಚೂರಿನಲ್ಲಿ ಸ್ವಾಮೀಜಿ ದಾಖಲಾಗಿದ್ದ ಸಂದರ್ಭದಲ್ಲಿ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ : ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ



















