ಬೆಂಗಳೂರು: ಡಾ. ವಿಷ್ಣುವರ್ಧನ್ ಸಮಾಧಿ ನೆಲಸಮ ವಿಚಾರವಾಗಿ ವಿಷ್ಣು ಅಳಿಯ ಅನಿರುದ್ಧ್ ಚರ್ಚೆಗೆ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿರುವ ನಿವಾಸದಲ್ಲಿ ಈ ಸಭೆ ನಡೆಯಲಿದ್ದು, ಅಭಿಮಾನಿಗಳು ಹಾಗೂ ಮಾಧ್ಯಮಗಳ ಎದುರು ಚರ್ಚೆ ನಡೆಯಲಿದೆ. ಈ ವೇಳೆ ವಿಷ್ಣು ಅಭಿಮಾನಿಗಳು ಹಾಗೂ ವಿಷ್ಣು ಕುಟುಂಬಸ್ಥರ ಮಧ್ಯೆ ಚರ್ಚೆ ನಡೆಯಲಿದೆ.
ಹೈಕೋರ್ಟ್ ಆದೇಶದ ಮೇರೆಗೆ ಸಮಾಧಿ ತೆರವುಗೊಂಡಿರುವುದರಿಂದಾಗಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ. ಹೀಗಾಗಿ ಚರ್ಚೆಯ ಮೂಲಕ ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾರೆ.