ಮೈಸೂರು : ʼನಿಮ್ಮ ಋಣ ಈ ಜನ್ಮದಲ್ಲಿ ತೀರಿಸಲು ಆಗಲ್ಲ, ನಮ್ಮ ತಂದೆಯವರು ಸಿಎಂ ಆಗಲು ನಾನು ಎಂಎಲ್‌ಸಿ ಆಗಲು ನೀವೇ ಕಾರಣʼ ಎಂದು ವರುಣಾ ಕ್ಷೇತ್ರದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಭಾವುಕವಾಗಿ ಮಾತನಾಡಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವರುಣಾ ಕ್ಷೇತ್ರದ ಮಾಕನಹುಂಡಿ ಗ್ರಾಮದ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರ ಸಮಸ್ಯೆಗಳಿಗೆ ಮೊದಲು ಸ್ಪಂದಿಸಬೇಕು ಎಂದು ಕಿವಿಮಾತು ಹೇಳುವ ಮೂಲಕ ಗ್ರಾಮಕ್ಕೆ ಬೇಕಿರುವ ಮೂಲಸೌಕರ್ಯ ಕಲ್ಪಿಸುವಂತೆ ಅವರು ಸೂಚನೆ ನೀಡಿದ್ದಾರೆ.



















