ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ, ಬೆಂಗಳೂರಿನಲ್ಲೇ ಇರುವ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO ADE Recruitment 2026) ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜೂನಿಯರ್ ರಿಸರ್ಚ್ ಫೆಲೋ ಹಾಗೂ ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ, ರಿಸರ್ಚ್ ಅಸೋಸಿಯೇಟ್
ಒಟ್ಟು ಹುದ್ದೆ: 8
ಉದ್ಯೋಗ ಸ್ಥಳ: ಬೆಂಗಳೂರು
ಡಿಆರ್ ಡಿಒದ ಏರೋನಾಟಿಕಲ್ ಡೆವಲಪ್ ಮೆಂಟ್ ಎಶ್ಟಾಬ್ಲಿಶ್ ಮೆಂಟ್ (ADE) ಸಂಸ್ಥೆಯಲ್ಲಿ ನೇಮಕಾತಿ ನಡೆಯುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಪಿಎಚ್.ಡಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ anjanaur.ade@gov.in ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದ
ಪ್ರಮುಖ ದಿನಾಂಕಗಳು
ಅಧಿಸೂಚನೆ ದಿನಾಂಕ: ಮಾರ್ಚ್ 4
ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 24
ಜೆಆರ್ ಎಫ್ ಸ್ಕ್ರೀನಿಂಗ್ ಟೆಸ್ಟ್: ಏಪ್ರಿಲ್ 7
ಜೆಆರ್ ಎಫ್ ಸಂದರ್ಶನ: ಏಪ್ರಿಲ್ 7, 8
ರಿಸರ್ಚ್ ಅಸೋಸಿಯೇಟ್ ಸಂದರ್ಶನ: ಏಪ್ರಿಲ್ 9
ಸಂದರ್ಶನ ನಡೆಯುವ ಸ್ಥಳ
ADE, DRDO, Raman Gate, Suranjandas Road, New Thippasandra Post,Bengaluru – 560075.
ಇದನ್ನೂ ಓದಿ : ಹಾವೇರಿಯಲ್ಲಿ ನಕಲಿ ವೈದ್ಯರ ಹಾವಳಿ.. SSLC ಓದಿದ ಈತ ಊರಿಗೆಲ್ಲ ಫೇಮಸ್ ಡಾಕ್ಟರ್!



















