ಬೆಂಗಳೂರು : ಈಗಷ್ಟೇ ಬಿಇ, ಬಿ.ಟೆಕ್ ಸೇರಿ ಯಾವುದೇ ಪದವಿ ಪೂರ್ಣಗೊಳಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ವೃತ್ತಿ ತರಬೇತಿ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಕೇಂದ್ರ ಸರ್ಕಾರಿ ಸ್ವಾಮ್ಯದ, ಬೆಂಗಳೂರಿನಲ್ಲೇ ಇರುವ ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ ಡಿಒ) ಡಿಫೆನ್ಸ್ ಬಯೋ-ಎಂಜಿನಿಯರಿಂಗ್ ಆ್ಯಂಡ್ ಎಲೆಕ್ಟ್ರೋಮೆಡಿಕಲ್ ಲ್ಯಾಬೊರೇಟರಿಯಲ್ಲಿ (DRDO DEBEL Recruitment 2026) ಖಾಲಿ ಇರುವ 28 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಡಿಆರ್ ಡಿಒ ಡಿಫೆನ್ಸ್ ಬಯೋ-ಎಂಜಿನಿಯರಿಂಗ್ ಆ್ಯಂಡ್ ಎಲೆಕ್ಟ್ರೋಮೆಡಿಕಲ್ ಲ್ಯಾಬೊರೇಟರಿ
ಒಟ್ಟು ಹುದ್ದೆಗಳು: 28
ಹುದ್ದೆಗಳ ಹೆಸರು: ಗ್ರಾಜ್ಯುಯೇಟ್ ಅಪ್ರೆಂಟಿಸ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 20
ನೇಮಕಾತಿ ಹೊಂದಿದವರಿಗೆ ಮಾಸಿಕ 12,300 ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಬಿ.ಇ, ಬಿ.ಟೆಕ್, ಬಿಎಸ್ಸಿ, ಬಿ.ಕಾಂ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ drdo.gov.in ಗೆ ಭೇಟಿ ನೀಡಬೇಕು.
ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ – ಡಿಸಿಎಂ ಡಿಕೆಶಿ ಖಡಕ್ ಸೂಚನೆ!



















