ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ-ಡಿಫೆನ್ಸ್ ಟೆಕ್ನಾಲಜೀಸ್ (DRDO DIBT Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 43 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಡಿ ಆರ್ ಡಿ ಒ ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ-ಡಿಫೆನ್ಸ್ ಟೆಕ್ನಾಲಜೀಸ್
ಒಟ್ಟು ಹುದ್ದೆಗಳು: 43
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ರಿಸರ್ಚ್ ಫೆಲೋಸ್, ರಿಸರ್ಚ್ ಅಸೋಸಿಯೇಟ್
ಡಿ ಆರ್ ಡಿ ಒ ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ-ಡಿಫೆನ್ಸ್ ಟೆಕ್ನಾಲಜೀಸ್ ಘಟಕವು ಮೈಸೂರಿನಲ್ಲಿದ್ದು, ಸಾಂಸ್ಕೃತಿಕ ನಗರಿಯಲ್ಲಿ ಕೆಲಸ ಮಾಡಲು ಬಯಸುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಎಂ.ಟೆಕ್, ಪಿಎಚ್.ಡಿ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಕನಿಷ್ಠ 28ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. drdo.gov.in ವೆಬ್ ಸೈಟ್ ಗೆ ತೆರಳಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅದನ್ನು ಪ್ರಿಂಟ್ ಔಟ್ ತೆಗೆದುಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ Centre Head, DIBT, Siddarthanagar, Mysore-570011 ವಿಳಾಸಕ್ಕೆ ಕಳುಹಿಸಬೇಕು.