ಬೆಂಗಳೂರು : ನೀವೇನಾದರೂ ಮೈಸೂರಿನವರಾಗಿದ್ದು, ನಿಮ್ಮೂರಿನಲ್ಲಿಯೇ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ ಡಿಫೆನ್ಸ್ ಟೆಕ್ನಾಲಜೀಸ್ (DRDO DIBT Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎರಡು ಪೇಡ್ ಇಂಟರ್ನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ ಡಿಫೆನ್ಸ್ ಟೆಕ್ನಾಲಜೀಸ್ (DRDO DIBT)
ಹುದ್ದೆಗಳ ಹೆಸರು: ಪೇಡ್ ಇಂಟರ್ನ್
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 15
ಉದ್ಯೋಗ ಸ್ಥಳ: ಮೈಸೂರು
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ. ಜೂನ್ 20ರಂದು ಇಂಟರ್ನ್ ಶಿಪ್ ಗೆ ಆಯ್ಕೆಯಾದವರ ಕುರಿತು ಮಾಹಿತಿ ಒದಗಿಸಲಾಗುತ್ತದೆ. ಇದೇ ವರ್ಷದ ಜುಲೈ 1ರಿಂದ ಇಂಟರ್ನ್ ಶಿಪ್ ಆರಂಭವಾಗುತ್ತದೆ. ಆರು ತಿಂಗಳು ವೃತ್ತಿ ತರಬೇತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಪೇಡ್ ಇಂಟರ್ನ್ ಹುದ್ದೆಯ ಅಧಿಸೂಚನೆಯನ್ನು ಓದಿದ ಬಳಿಕ, ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು centrehead.dibt@gov.in, head.hrd.dfrl@gov.in ಗೆ ಮೇಲ್ ಮಾಡಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಎಕ್ಸಿಮ್ ಬ್ಯಾಂಕ್‌ನಲ್ಲಿ 4 ಮ್ಯಾನೇಜರ್ ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸ್ಯಾಲರಿ



















