ಬೆಂಗಳೂರು : ನೀವೇನಾದರೂ ಮೈಸೂರಿನವರಾಗಿದ್ದು, ನಿಮ್ಮೂರಿನಲ್ಲಿಯೇ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ ಡಿಫೆನ್ಸ್ ಟೆಕ್ನಾಲಜೀಸ್ (DRDO DIBT Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ ಡಿಫೆನ್ಸ್ ಟೆಕ್ನಾಲಜೀಸ್ (DRDO DIBT)
ಹುದ್ದೆಗಳ ಹೆಸರು: ಜೆಆರ್ ಎಫ್, ರಿಸರ್ಚ್ ಅಸೋಸಿಯೇಟ್
ಒಟ್ಟು ಹುದ್ದೆಗಳು: 5
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 23
ಉದ್ಯೋಗ ಸ್ಥಳ: ಮೈಸೂರು
4 ಜೂನಿಯರ್ ರಿಸರ್ಚ್ ಫೆಲೋ ಹಾಗೂ 1 ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕನಿಷ್ಠ 28ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಂ.ಇ, ಎಂ.ಟೆಕ್, ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿದ ಬಳಿಕ, ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ಅವಧಿಯೊಳಗೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Centre Head Defence Institute of Biodefence Technologies (DIBT) DRDO, Ministry of Defence Siddharthanagar, Mysuru-570011
ಇದನ್ನೂ ಓದಿ ; ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!



















