ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ, ಬೆಂಗಳೂರಿನ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO LRDE Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ LRDE
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆ: 2
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 25
ಡಿಆರ್ ಡಿಒದ ಎಲೆಕ್ಟ್ರಾನಿಕ್ಸ್ ಆ್ಯಂಡ್ ರೆಡಾರ್ ಡೆವಲಪ್ ಮೆಂಟ್ ಎಶ್ಟಾಬ್ಲಿಶ್ ಮೆಂಟ್ (LRDE) ಸಂಸ್ಥೆಯಲ್ಲಿ ನೇಮಕಾತಿ ನಡೆಯುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ಸಾಫ್ಟ್ ಕಾಪಿಗಳನ್ನು hrdlrde2010@gmail.com ಗೆ ಮೇಲ್ ಮಾಡಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 37 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ
Electronics & Radar Development Establishment (LRDE), DRDO Township, CV Raman Nagar, Bengaluru – 560093.
ಇದನ್ನೂ ಓದಿ : ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!



















