ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ರಾತ್ರಿ ವೇಳೆ ವಿಶೇಷ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುತ್ತಿದ್ದ 88 ಜನರನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಲಘು ಪ್ರಕರಣಗಳನ್ನು ದಾಖಲಿಸಲಾಗಿದೆ. ಚನ್ನಪಟ್ಟಣ ಹಾಗೂ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದೆ.
ರಾತ್ರಿ ವೇಳೆ ಖುದ್ದಾಗಿ ಫೀಲ್ಡ್ಗೆ ಇಳಿದ ಪೊಲೀಸರು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಪುಂಡಾಟ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಎಣ್ಣೆ ಪಾರ್ಟಿ ಮಾಡುವುದು ಹಾಗೂ ಅನಗತ್ಯವಾಗಿ ಗುಂಪುಗೂಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

















