ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮತ್ತು ರೋಡ್ ರೇಜ್ ಪ್ರಕರಣಗಳು ಮಿತಿಮೀರುತ್ತಿವೆ ಎಂಬುದಕ್ಕೆ ಮತ್ತೊಂದು ಆಘಾತಕಾರಿ ಸಾಕ್ಷಿ ಸಿಕ್ಕಿದೆ. ಜನನಿಬಿಡವಾದ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರನ್ನು ಎಳೆದೊಯ್ಯಲಾಗಿದೆ. ಈ ದೃಶ್ಯವನ್ನು ಕಂಡ ಸಾರ್ವಜನಿಕರು ಮತ್ತು ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ.
ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕಾರು ಚಾಲನೆ ಮಾಡಿದ ಆರೋಪಿ ಸುರೇಶ್ ಎಂಬಾತನನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ನಂಜುಂಡ ಎಂಬುವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!



















