ಕೊಡಗು: ಬಸ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದ ಚಾಲಕನ್ನು ಅರೆಸ್ಟ್ ಮಾಡಲಾಗಿದೆ.
ರಾಜ್ಯ ರಸ್ತೆ ಸಾರಿಗೆ ಬಸ್ ಗಳಲ್ಲಿ ಚಾಲನೆ ಸಂದರ್ಭದಲ್ಲಿ ಚಾಲಕರು ಮೊಬೈಲ್ ನಲ್ಲಿ ಮಾತನಾಡುವುದು, ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಆದರೂ ಕೂಡ ಕೆಲವರು ಬಳಕೆ ಮಾಡುತಿರುವುದು ಕಂಡು ಬರುತ್ತಿದ್ದು, ಸದ್ಯ ಇಂತಹ ಚಾಲಕರೊಬ್ಬರನ್ನು ಅರೆಸ್ಟ್ ಮಾಡಲಾಗಿದೆ.
ಪುತ್ತೂರು ಡಿಪೋ ಬಸ್ ಚಾಲಕರೊಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಚಾಲಕ ವೇಣುಗೋಪಾಲ್ ಬಂದಿತ ಚಾಲಕ. ಚಾಲಕನು ಮೊಬೈಲ್ ನಲ್ಲಿ ಮಾತನಾಡುತ್ತ ಬಸ್ ಚಾಲನೆ ಮಾಡುತ್ತಿದ್ದ ವೇಳೆ ವಿಡಿಯೋವನ್ನು ಪ್ರಯಾಣಿಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬಸ್ ಮಡಿಕೇರಿಯಿಂದ ಬಿರುನಾಣಿಗೆ ಹೋಗುತ್ತಿತ್ತು. ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತ ಚಲಾಯಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಮೊಬೈಲ್ ಬಳಕೆ ಮಾಡುತ್ತಿರುವುದನ್ನು ವಿಡಿಯೋ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ವಾಹಕ ರೂಪೇಶ್ ಜೊತೆ ಚಾಲಕ ವೇಣುಗೋಪಾಲ್ ಗಲಾಟೆ ಮಾಡಿದ್ದ. ಅಷ್ಟೇ ಅಲ್ಲದೇ, ಚಾಲಕ ವೇಣುಗೋಪಾಲ್ ಡಿಪೋ ಬಳಿ ಕೋವಿ ತಂದು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ರೂಪೇಶ್‌ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಕೂಡಲೆ ಸಾರಿಗೆ ಸಂಸ್ಥೆ ಚಾಲಕ ವೇಣುಗೋಪಾಲ್ ನನ್ನು ಅಮಾನತು ಮಾಡಿದೆ. ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ