ದಾವಣಗೆರೆ : ಆಟೋದಲ್ಲಿ ಕುಳಿತಿದ್ದಾಗಲೇ ಚಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.
ದಾವಣಗೆರೆಯ SOG ಕಾಲೋನಿ ನಿವಾಸಿ ಎಸ್.ಸಂಗಪ್ಪ ಮೃತ ದುರ್ದೈವಿ. ಹೃದಯಾಘಾತವಾಗಿರಬಹುದೆಂದು ಶಂಕಿಸಲಾಗಿದೆ. ಪ್ರಯಾಣಿಕರಿಗಾಗಿ ಆಟೋದಲ್ಲಿ ಕುಳಿತಿದ್ದ ಚಾಲಕ್ಕ ಸಂಗಪ್ಪ, ಹಠಾತ್ತನೇ ಸಾವನ್ನಪ್ಪಿದ್ದಾರೆ.
ಕೂಡಲೇ ಸಹ ಆಟೋ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ ಪೊಲೀಸರು ಸಂಗಪ್ಪ ಅವರನ್ನು ಆಸ್ಪತ್ರೆಗೆ ರವಾನಿಸಿದ್ದರು. ದುರಾದೃಷ್ಟವಶಾತ್ ಆಟೋ ಚಾಲಕ ಸಂಗಪ್ಪ ಅವರು ಮೃತಪಟ್ಟಿರುವುದಾಗಿ ಜಿಲ್ಲಾಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಕುರಿತು ಪ್ರಕರಣ ದಾಖಲಾಗಿದೆ.