ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ.ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿದೆ.
ಚಿಕ್ಕಮಗಳೂರು ಮೂಲದ ಚನ್ನೇಗೌಡ(60), ಸರೋಜಮ್ಮ(55) ಮತ್ತು ಜಯಮ್ಮ(70) ಮೃತ ದುರ್ದೈವಿಗಳು. ಥೈಲ್ಯಾಂಡ್ ಟೂರ್ ಮುಗಿಸಿ ನಿನ್ನೆ ಸಂಜೆ ಬೆಂಗಳೂರಿಗೆ ವಾಪಸಾಗಿದ್ದರು. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸದ್ಯ ಆದಿಚುಂಚನಗಿರಿ ಆಸ್ಪತ್ರೆಗೆ ಮೂವರ ಮೃತದೇಹ ಸ್ಥಳಾಂತರಿಸಲಾಗಿದ್ದು, ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವೇಗವಾಗಿ ಬಂದ ಚಾಲಕ | ವಿಮಾನದಂತೆ ಹಾರಿದ ಮರ್ಸಿಡಿಸ್ ಕಾರು



















