ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರ್ಮಿಕರಿದ್ದ ಟಾಟಾ ಏಸ್ ಪಲ್ಟಿಯಾಗಿರುವ ಘಟನೆ ನಡೆದಿದೆ.
ಟಾಟಾ ಏಸ್ ನಲ್ಲಿ ನರೇಗಾ ಕಾರ್ಮಿಕರಿದ್ದರು ಎನ್ನಲಾಗಿದೆ. ಟಾಟಾ ಏಸ್ ಪಲ್ಟಿಯಾದ ಪರಿಣಾಮ 31 ಜನ ಗಾಯಗೊಂಡಿದ್ದಾರೆ. ಈ ಘಟನೆ (Karatagi) ತಾಲೂಕಿನ ಬರಗೂರು ಕ್ರಾಸ್ ಬಳಿ ನಡೆದಿದೆ. ಮುಸ್ಟೂರು ಗ್ರಾಮ ಪಂಚಾಯತಿಯ ನರೇಗಾ ಕಾರ್ಮಿಕರು ಕೆಲಸಕ್ಕಾಗಿ ಟಾಟಾ ಏಸ್ ವಾಹನದಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬರಗೂರು ಕ್ರಾಸ್ ಬಳಿ ವಾಹನ ಪಲ್ಟಿಯಾಗಿದೆ. ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದು, 28 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹುಬ್ಬಳ್ಳಿ ಹಾಗೂ ಕೊಪ್ಪಳದ ಕಿಮ್ಸ್ ಆಸ್ಪತ್ರೆಗೆ ಗಾಯಾಳುಗಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.