ದಾವಣಗೆರೆ ; ಜಿಲ್ಲೆಯ ಹದಡಿ ಗ್ರಾಮದ ಕೆರೆಯಲ್ಲಿ ಕಾರೊಂದು ಬಿದ್ದ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ನೇರವಾಗಿ ಕೆರೆಗೆ ಬಿದ್ದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಕಾರು ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ.
ದಾವಣಗೆರೆ ಮೂಲದ ವ್ಯಕ್ತಿಗೆ ಸೇರಿದ ಕಾರು ಕುಕ್ಕುವಾಡ ಗ್ರಾಮದ ಕಡೆಯಿಂದ ದಾವಣಗೆರೆ ಕಡೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಕಾರು ಕೆರೆಗೆ ಬೀಳುತ್ತಿದ್ದಂತೆಯೇ ಚಾಲಕ ತಕ್ಷಣ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಚಾಲಕ ಮದ್ಯ ಸೇವನೆ ಮಾಡಿ ಕಾರು ಚಲಾಯಿಸಿದ್ದರಿಂದಲೇ ವಾಹನದ ನಿಯಂತ್ರಣ ತಪ್ಪಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಹದಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ : 700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ



















