ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯ ತಾವರೆಕರೆಯಲ್ಲಿ ನಡೆದಿದೆ.
ಮಾರುತಿ ಆಲ್ಟೋ ಕಾರಿನಲ್ಲಿ ಮೂವರು ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ತಾವರೆಕೆರೆಗೆ ಕಾರು ಉರುಳಿದೆ. ಕಾರು ಕೆರೆಗೆ ಉರುಳುತ್ತಿದ್ದಂತೆ ತಕ್ಷಣ ಸ್ಥಳಿಯರು ಕಾರನ್ನು ಬದಿಗೆ ತಂದು, ಮೂರನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ. ಈ ಸಂಬಂಧ ರಿಪ್ಪನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಅಮೆರಿಕದ ಆಲ್ಬನಿಯಲ್ಲಿಅಗ್ನಿ ದುರಂತ | ತೆಲಂಗಾಣ ಮೂಲದ ವಿದ್ಯಾರ್ಥಿನಿ ಸಾವು



















