ಹಾವೇರಿ : ಹಾವೇರಿ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ಅಪಘಾತದ ನಡೆದಿದೆ. ಸುಮಾರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಹಾವೇರಿ ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಬಸ್‌ಗಾಗಿ ಫ್ಲಾಟ್‌ಫಾರ್ಮ್‌ನಲ್ಲಿ ಕಾಯುತ್ತಿದ್ದ ಪ್ರಯಾಣಿಕರ ನಡುವೆ ಏಕಾಏಕಿ ಬಸ್ ನುಗ್ಗಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಳಕಾಗಿದ್ದಾರೆ.
ಚಾಲಕನ ನಿರ್ಲಕ್ಷ್ಯ ಮತ್ತು ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಸ್ ನುಗ್ಗಿದ ರಭಸಕ್ಕೆ 2 ವರ್ಷದ ಪುಟ್ಟ ಮಗು ಹಜರತ್ ಅಲಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ಮಾಡುತ್ತಿದ್ದಾನೆ.
ಈ ಅಪಘಾತದಲ್ಲಿ ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ : ಪಾನಿಪುರಿ ತಿನ್ನುತ್ತಿದ್ದ ಯುವತಿ ಕಲ್ಲು ಎಸೆದ ಆರೋಪ.. ಸ್ಥಳೀಯರಿಂದ ಬಿತ್ತು ಗೂಸಾ!


















