ಕರ್ತವ್ಯದಲ್ಲಿದ್ದಾಗಲೇ ರಾಜ್ಯ ಸಾರಿಗೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಪ್ರಯಾಣಿಕರಿದ್ದ ಬಸ್ಸನ್ನ ನಿಲ್ಲಿಸಿ ನಮಾಜ್ ಮಾಡಿದ್ದ ತಪ್ಪಿಗೆ ಚಾಲಕ ಎ ಆರ್ ಮುಲ್ಲಾರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಹಾನಗಲ್ ಡಿಪೋದ ಚಾಲಕರಾಗಿದ್ದ ಮುಲ್ಲಾರನ್ನುಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್ ಚಾಲಕರಾಗಿದ್ದ ಮುಲ್ಲಾ, ಕರ್ತವ್ಯದಲ್ಲಿದ್ದಾಗಲೇ ಪ್ರಯಾಣಿಕರಿದ್ದ ಬಸ್ಸನ್ನ ನಿಲ್ಲಿಸಿ ನಮಾಜ್ ಮಾಡಿದ್ದರು.
ಈ ವಿಡಿಯೋ ರಾಜ್ಯದೆಲ್ಲೆಡೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲೇ ಇದೀಗ ಮುಲ್ಲಾರನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.