ತುಮಕೂರು: ಮತ್ತೊಮ್ಮ ಕಾಗೆ ಹಾರಿಸಲು ಯತ್ನಿಸಿದ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೃಷಿ ಹೊಂಡದಲ್ಲಿ ಸೋಡಿಯಂ (Sodium) ಹಾಕಿ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ್ನು ಮಿಡಿಗೇಶಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರೋನ್ ಪ್ರತಾಪ್ ನೀರಿನಲ್ಲಿ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದ. ಹೀಗಾಗಿ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಹೀಗಾಗಿ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರತಾಪ್ ನನ್ನು ಅರೆಸ್ಟ್ ಮಾಡಿದ್ದಾರೆ.
ನೀರಿಗೆ ಕೆಮಿಕಲ್ ಹಾಕಿ ಡ್ರೋನ್ ಪ್ರತಾಪ್ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ. ಬೆಂಕಿ ಸಹ ಚಿಮ್ಮಿದೆ. ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದಾನೆ.
ಈ ರೀತಿ ವಿಡಿಯೋ ಮಾಡುವುದು ಕಾನೂನು ರೀತಿ ಅಪರಾಧ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿತ್ತು. ಯಾವೆಲ್ಲ ಕೆಮಿಕಲ್ ಹಾಕಿದ್ರೇ ಬ್ಲಾಸ್ಟ್ ಆಗುತ್ತೆ ಅಂತಾನೂ ಲೈವ್‌ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕುಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.