ಬೆಳಗಾವಿ: ನರೇಂದ್ರ ಮೋದಿ (Narendra Modi) ಅವರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗೆ ಇಳಿಸಿ, ಬೇರೆಯವರನ್ನು ಮಾಡಿ ಎಂದು ಕಾರ್ಮಿಕ ಸಂತೋಷ್ ಲಾಡ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ ಪ್ರಧಾನಿಯಾಗಬೇಕು ಎಂದು ಬಿಜೆಪಿಗೆ ಸಲಹೆ ನೀಡಿದ್ದಾರೆ. ಸದ್ಯದ ಮಾಹಿತಿಯಂತೆ ಪ್ರಧಾನಿ ಮೋದಿ ಅವರನ್ನು ಕೆಳಗೆ ಇಳಿಸುತ್ತಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ (Nitin Gadkari) ಪೈಕಿ ಒಬ್ಬರು ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದಾರೆ.
ಮೋದಿಯನ್ನು ಕೆಳಗಿಸಿ ಬೇರೆಯವರನ್ನು ಪ್ರಧಾನಮಂತ್ರಿ ಮಾಡಬೇಕೆಂದು ನಾನು ಬಿಜೆಪಿ ನಾಯಕರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ. ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಿ ನಾನೇ ಬುದ್ಧಿವಂತ, ವಿಶ್ವ ಗುರು ಅಂತಾ ಬಿಜೆಪಿಯವರು ಹೇಳಿದ್ರೆ ಹೇಗೆ ಎಂದು ಟೀಕೆ ಮಾಡಿದ್ದಾರೆ.